ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ ಮಾಡಲು ಆಗಲ್ಲ ಎಂದು ಕಿಡಿಕಾರಿದರು.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯಬೇಕೆಂದು ನಿರ್ಧರಿಸಿದೆ. ಬಳಿಕ, ಸಂಪುಟದ ನಿರ್ಧಾರ ನ್ಯಾಯಾಲಯದ ಮುಂದೆ ಹೋಗಬೇಕು. ನ್ಯಾಯಾಲಯ ಒಪ್ಪಿದರೆ ಮಾತ್ರ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದಂತೆ ಆಗುತ್ತದೆ ಎಂದರು.
ಈ ಪ್ರಕರಣದ ಬಗ್ಗೆ ಬಿಜೆಪಿ ಅವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ನ್ಯಾಯಾಲಯದಲ್ಲಿ ಸುಳ್ಳು ಕೇಸ್ ಇದ್ದರೆ ಅಥವಾ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ ಹಾಗೂ ಹೋರಾಟ ಮಾಡಿದಾಗ ಪ್ರಕರಣ ದಾಖಲಾಗಿದ್ದರೆ ಅಂತಹ ಕೇಸ್‌ಗಳನ್ನು ಹಿಂಪಡೆಯುವ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದರು.
ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಗ್ಗೆ ಮಾತನಾಡಿದ ಅವರು, ಜೋಶಿ ಓರ್ವ ಭಯೋತ್ಪಾದಕ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…