Categories: ರಾಜ್ಯ

ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ ಹೀಗೆಲ್ಲಾ ಹೇಳುತ್ತಿದ್ದಾರೆ. ಶಾಸಕರ ಸಾರ್ವಜನಿಕ ಬದುಕನ್ನು ಕಲುಷಿತಗೊಳಿಸುವ ಸಲುವಾಗಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದರು.

ಕಾಂಗ್ರೆಸ್‌ನ ಒಬ್ಬ ಶಾಸಕನಿಗೆ 50 ಕೋಟಿ ರೂಪಾಯಿ ಅಂದರೆ 2500 ಕೋಟಿ ರೂಪಾಯಿಗಳಷ್ಟು ಆಗುತ್ತದೆ. ಸಿಎಂ ಸಿದ್ದರಾಮಯ್ಯಗೆ ಈ ವಿಚಾರದ ಬಗ್ಗೆ ಸ್ವಲ್ವವಾದರೂ ಸೆನ್ಸ್‌ ಇದೆಯಾ? ಸಿಎಂ ರಾಜಕಾರಣ ಮಾಡಬೇಕೆಂಬ ಕಾರಣಕ್ಕೆ ಹೀಗೆಲ್ಲಾ ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.

 

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

4 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

5 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

5 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

5 hours ago