ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಪ್ರಸ್ತಾವನೆ ಸಲ್ಲಿಸಿದ ಸಚಿವ ಸೋಮಣ್ಣ ಅವರು, ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ಇನ್ನು ತುಮಕೂರು-ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ- ದಾವಣಗೆರೆ ರೈಲ್ವೆ ಮಾರ್ಗವನ್ನು 2027ರ ಜೂನ್ ವೇಳೆಗೆ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮತ್ತು ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.