ದಾವಣಗೆರೆ : ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಇದರಲ್ಲಿ ಆರ್ಥಿಕ ಪರಿಸ್ಥಿತಿಯ ದಾಖಲೆ ಇರುವುದಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ನಾವು ಮರು ಸಮೀಕ್ಷೆ ಅಗತ್ಯತೆಯನ್ನು ಮನಗಂಡು ಮರು ಸಮೀಕ್ಷೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.
ಇದನ್ನೂ ಓದಿ:– ಜನರನ್ನು ಡೈವರ್ಟ್ ಮಾಡೋದೆ ಸಿಎಂ ಸಿದ್ದರಾಮಯ್ಯ ಕೆಲಸ: ಶಾಸಕ ಟಿ.ಎಸ್.ಶ್ರೀವತ್ಸ
ಕಾಯ್ದೆಯ ಪ್ರಕಾರ ಮರುಗಣತಿ
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…