hc mahadevappa
ಬೆಂಗಳೂರು : ಸಾಂವಿಧಾನಿಕ ಬದ್ಧತೆ ಇಲ್ಲದ ಕೇಂದ್ರ ಸರ್ಕಾರ ಕಳೆದ 15 ವರ್ಷಗಳಿಂದಲೂ ಗಣತಿ ಕಾರ್ಯವನ್ನು ಮಾಡದೇ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ 10 ವರ್ಷಕ್ಕೊಮ್ಮೆ ಗಣತಿ ನಡೆಯಬೇಕು. 2011 ರಲ್ಲಿ ಗಣತಿಯಾಗಿದ್ದು 14 ವರ್ಷ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.
ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿಗೆ ಗಣತಿ ಅತ್ಯಗತ್ಯ
ಸರ್ಕಾರಗಳು ಸಾಮಾಜಿಕ ನ್ಯಾಯದ ಬದ್ಧತೆಗೆ ಒಳಗಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಮೂಲಕ ಸೌಲಭ್ಯಗಳನ್ನು ನೀಡಬೇಕು. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಸೇರಿದಂತೆ ಇತರ ಕೆಲಸಗಳಿಗಾಗಿ ಜನಗಣತಿ ಅತ್ಯಗತ್ಯವಾಗಿದೆ. 2021 ರಲ್ಲಿ ಕೋವಿಡ್ ಸಮಸ್ಯೆ ಇತ್ತು ಎಂಬ ನೆಪ ಹೇಳುತ್ತಿದ್ದರು. ಎಲ್ಲವೂ ಮುಗಿದು ಮೂರು ವರ್ಷವಾದರೂ ಈವರೆಗೂ ಜನಗಣತಿ ಶುರುವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಸರ್ಕಾರ ಜನರಿಗೆ ಸಿಗುವ ಸಾಂವಿಧಾನಿಕ ಸೌಲಭ್ಯಗಳಿಂದ ವಂಚಿಸಬಾರದು ಎಂಬ ಕಾರಣಕ್ಕೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದೆ. 2015 ರಲ್ಲಿ ನಡೆಸಲಾದ ಸಮೀಕ್ಷೆಗೆ 10 ವರ್ಷವಾಗಿದೆ ಎಂಬ ಕಾರಣಕ್ಕಾಗಿ ಮತ್ತೊಮ್ಮೆ ಹೊಸ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದು ಅರ್ಥಪೂರ್ಣವಾದ ಕಾರ್ಯಕ್ರಮ. ಬಿಜೆಪಿಯವರು ಒಕ್ಕೂಟ ವ್ಯವಸ್ಥೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಸಂವಿಧಾನಬದ್ಧವಾದ ಹಕ್ಕುಗಳ ಬಗ್ಗೆ ಅವರಿಗೆ ಅಸಡ್ಡೆ ಇದೆ ಎಂದು ಆರೋಪಿಸಿದರು.
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…