ರಾಜ್ಯ

ಗಣತಿ ಕಾರ್ಯ ಮಾಡದೇ ಅನ್ಯಾಯ ಮಾಡುತ್ತಿರುವ ಕೇಂದ್ರ : ಸಚಿವ ಮಹದೇವಪ್ಪ ಆರೋಪ

ಬೆಂಗಳೂರು : ಸಾಂವಿಧಾನಿಕ ಬದ್ಧತೆ ಇಲ್ಲದ ಕೇಂದ್ರ ಸರ್ಕಾರ ಕಳೆದ 15 ವರ್ಷಗಳಿಂದಲೂ ಗಣತಿ ಕಾರ್ಯವನ್ನು ಮಾಡದೇ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ 10 ವರ್ಷಕ್ಕೊಮ್ಮೆ ಗಣತಿ ನಡೆಯಬೇಕು. 2011 ರಲ್ಲಿ ಗಣತಿಯಾಗಿದ್ದು 14 ವರ್ಷ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.

ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿಗೆ ಗಣತಿ ಅತ್ಯಗತ್ಯ
ಸರ್ಕಾರಗಳು ಸಾಮಾಜಿಕ ನ್ಯಾಯದ ಬದ್ಧತೆಗೆ ಒಳಗಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಮೂಲಕ ಸೌಲಭ್ಯಗಳನ್ನು ನೀಡಬೇಕು. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಸೇರಿದಂತೆ ಇತರ ಕೆಲಸಗಳಿಗಾಗಿ ಜನಗಣತಿ ಅತ್ಯಗತ್ಯವಾಗಿದೆ. 2021 ರಲ್ಲಿ ಕೋವಿಡ್ ಸಮಸ್ಯೆ ಇತ್ತು ಎಂಬ ನೆಪ ಹೇಳುತ್ತಿದ್ದರು. ಎಲ್ಲವೂ ಮುಗಿದು ಮೂರು ವರ್ಷವಾದರೂ ಈವರೆಗೂ ಜನಗಣತಿ ಶುರುವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಸರ್ಕಾರ ಜನರಿಗೆ ಸಿಗುವ ಸಾಂವಿಧಾನಿಕ ಸೌಲಭ್ಯಗಳಿಂದ ವಂಚಿಸಬಾರದು ಎಂಬ ಕಾರಣಕ್ಕೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದೆ. 2015 ರಲ್ಲಿ ನಡೆಸಲಾದ ಸಮೀಕ್ಷೆಗೆ 10 ವರ್ಷವಾಗಿದೆ ಎಂಬ ಕಾರಣಕ್ಕಾಗಿ ಮತ್ತೊಮ್ಮೆ ಹೊಸ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದು ಅರ್ಥಪೂರ್ಣವಾದ ಕಾರ್ಯಕ್ರಮ. ಬಿಜೆಪಿಯವರು ಒಕ್ಕೂಟ ವ್ಯವಸ್ಥೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಸಂವಿಧಾನಬದ್ಧವಾದ ಹಕ್ಕುಗಳ ಬಗ್ಗೆ ಅವರಿಗೆ ಅಸಡ್ಡೆ ಇದೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

5 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

12 hours ago