Mysore
29
overcast clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

ಸಿಇಟಿ: ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್.‌15ಕ್ಕೆ ಹಿಂದೂಡಿಕೆ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.‌18ಕ್ಕೆ ಬದಲಾಗಿ ಏಪ್ರಿಲ್.‌15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ.

ಏಪ್ರಿಲ್.‌18ರಂದು ಶುಭ ಶುಕ್ರವಾರ ಇರುವುದರಿಂದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು, ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಅಂದು ಬೆಳಿಗ್ಗೆ 10.30ರಿಂದ 11.30ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!