ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.18ಕ್ಕೆ ಬದಲಾಗಿ ಏಪ್ರಿಲ್.15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ.
ಏಪ್ರಿಲ್.18ರಂದು ಶುಭ ಶುಕ್ರವಾರ ಇರುವುದರಿಂದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು, ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಅಂದು ಬೆಳಿಗ್ಗೆ 10.30ರಿಂದ 11.30ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…