ರಾಜ್ಯ

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಕಳೆದ ವರ್ಷ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಪರೀಕ್ಷಾ ಕೇಂದ್ರಗಳಲ್ಲಿ ತೆಗೆದು ಹಾಕಿದ್ದು ಭಾರೀ ವಿವಾದ ಸೃಷ್ಟಿಸಿತ್ತು. ಈಗ ಬೆಂಗಳೂರಿನ ಮಡಿವಾಳದಲ್ಲಿರುವ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆಯ ಜೀವಶಾಸ್ತ್ರ ಮತ್ತು ಗಣಿತ ಪತ್ರಿಕೆ ಪರೀಕ್ಷೆ ಬರೆಯಲು ಬಂದಿದ್ದ ಐವರು ವಿದ್ಯಾರ್ಥಿಗಳ ಜನಿವಾರವನ್ನು ಸಿಬ್ಬಂದಿಗಳು ಬಲವಂತವಾಗಿ ತೆಗೆದು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾಲೇಜು ಪರೀಕ್ಷೆ ಕೇಂದ್ರದಲ್ಲಿ ಆನಂದ್ ಸುಧೀರ್ ರಾವ್ ಎಂಬ ವಿದ್ಯಾರ್ಥಿ ಸೇರಿದಂತೆ ಐದಕ್ಕೂ ಹೆಚ್ಚು ಮಕ್ಕಳ ಜನಿವಾರ ತೆಗೆಸಿದ್ದಾರೆ. ಈ ವೇಳೆ ವಿದ್ಯಾರ್ಥಿ ತಗೆಯಲ್ಲ ಎಂದು ಹೇಳಿದಕ್ಕೆ ಮನೆಗೆ ವಾಪಸ್ ಹೋಗಿ ಅಂದಿದ್ದಾರೆ. ಅದಕ್ಕೆ ಕೊನೆಗೆ ಪೋಷಕರು ಮಗನ ಭವಿಷ್ಯದ ದೃಷ್ಠಿಯಿಂದ ಜನಿವಾರ ತೆಗೆದು ಪರೀಕ್ಷೆ ಕೇಂದ್ರಕ್ಕೆ ಕಳುಹಿಸಿದ್ದಾರೆ. ವಿವಾದವಾದ ಬೆನ್ನಲ್ಲೇ ಕಾಲೇಜಿಗೆ ತಹಶೀಲ್ದಾರ್, ಶಿಕ್ಷಣಾಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದರು. ಪೋಷಕರ ಮನವೊಲಿಸಿ ಎಲ್ಲೂ ಈ ಬಗ್ಗೆ ಹೇಳದ್ದಂತೆ ಒತ್ತಾಯ ಮಾಡಿ ಲೆಟರ್ ಹಾಕಿಸಿಕೊಂಡಿದ್ದರು. ಅದೇ ಕಾಲೇಜು ಸಿಬ್ಬಂದಿ ಪೋಷಕರಿಗೆ ಕ್ಷಮೆ ಕೇಳಿ, ಜನಿವಾರ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ವಸ್ತ್ರ ಸಂಹಿತೆ ನೆಪದಲ್ಲಿ ಯಾವುದೇ ಧರ್ಮದ ಭಾವನೆಗಳಿಗೆ ಧಕ್ಕೆ ತರಬಾರದೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಇದರ ನಡುವೆಯೂ ಪರೀಕ್ಷೆ ಬರೆಯಲು ಬಂದಿದ್ದ ಐವರು ವಿದ್ಯಾರ್ಥಿಗಳ ಜನಿವಾರವನ್ನು ತಪಾಸಣೆ ನಡೆಸುವ ಸಂದರ್ಭದಲ್ಲಿ ತೆಗೆದು ಹಾಕಿದ್ದಾರೆ.

ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದ ಕಚೇರಿಯೊಳಗೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ.

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago