Mysore
23
overcast clouds

Social Media

ಗುರುವಾರ, 11 ಜೂನ್ 2026
Light
Dark

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿವೆ.

ಏ.23ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ (60 ಅಂಕಗಳು), ಅದೇ ದಿನ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ಜುರುಗಲಿವೆ. ಏ.24ರಂದು ಶುಕ್ರವಾರ ಬೆಳಿಗ್ಗೆ 10. 30ರಿಂದ 11.50ಗಂಟೆವರೆಗೆ ಗಣಿತಶಾಸ್ತ್ರ (60 ಅಂಕಗಳು) ಹಾಗೂ ಅದೇ ದಿನ ಮಧ್ಯಾಹ್ನ 2.30ರಿಂದ 3.50 ರವರೆಗೆ ಜೀವಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಗಳನ್ನು ಬೆಂಗಳೂರು, ಬೆಳಗಾವಿ, ವಿಜಯಪುರ ಹಾಗೂ ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಈ ಪರೀಕ್ಷೆ ಬುಧವಾರ (ಏ.22) ಬೆಳಿಗ್ಗೆ 10.30ರಿಂದ 11.30 ರವರೆಗೆ ನಡೆಯಲಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಡಿಸಿ, ಎಸ್‌ಪಿ ಬಿಗಿಭದ್ರತೆಯ ಉಸ್ತುವಾರಿ ಇದೆ. ಸಿಇಟಿ ಕರ್ತವ್ಯಕ್ಕೆ 20,300ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

Tags:
error: Content is protected !!