ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿವೆ.
ಏ.23ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ (60 ಅಂಕಗಳು), ಅದೇ ದಿನ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ಜುರುಗಲಿವೆ. ಏ.24ರಂದು ಶುಕ್ರವಾರ ಬೆಳಿಗ್ಗೆ 10. 30ರಿಂದ 11.50ಗಂಟೆವರೆಗೆ ಗಣಿತಶಾಸ್ತ್ರ (60 ಅಂಕಗಳು) ಹಾಗೂ ಅದೇ ದಿನ ಮಧ್ಯಾಹ್ನ 2.30ರಿಂದ 3.50 ರವರೆಗೆ ಜೀವಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಗಳನ್ನು ಬೆಂಗಳೂರು, ಬೆಳಗಾವಿ, ವಿಜಯಪುರ ಹಾಗೂ ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಈ ಪರೀಕ್ಷೆ ಬುಧವಾರ (ಏ.22) ಬೆಳಿಗ್ಗೆ 10.30ರಿಂದ 11.30 ರವರೆಗೆ ನಡೆಯಲಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಡಿಸಿ, ಎಸ್‌ಪಿ ಬಿಗಿಭದ್ರತೆಯ ಉಸ್ತುವಾರಿ ಇದೆ. ಸಿಇಟಿ ಕರ್ತವ್ಯಕ್ಕೆ 20,300ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…