ರಾಜ್ಯ

ಚಾ.ನಗರ | ಹುಲಿ ಮರಿಗಳೊಂದಿಗೆ ಫೋಟೋ,ವಿಡಿಯೋ ; ಸಿಐಡಿ ತನಿಖೆಗೆ ಖಂಡ್ರೆ ಆದೇಶ

ಬೆಂಗಳೂರು : ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, 2015ರಲ್ಲಿ ಅರಣ್ಯ ಅಪರಾಧ ಪ್ರಕರಣ ದಾಖಲಾಗಿದ್ದ ಸಂಸ್ಥೆಯೊಂದರೊಂದಿಗೆ ನಂಟು ಹೊಂದಿರುವವರೂ ಸೇರಿ ಕೆಲವರು ಅರಣ್ಯದಲ್ಲಿ ವಾಹನದ ಹೆಡ್ ಲೈಟ್ ಬೆಳಕಲ್ಲಿ, ಹುಲಿಮರಿಗಳ ಚಿತ್ರೀಕರಣ ಮಾಡಿ, ಸ್ಪರ್ಶಿಸಿ ವನ್ಯಜೀವಿ ಕಾಯಿದೆ ಉಲ್ಲಂಘಿಸಿರುವ ಬಗ್ಗೆ ಹಾಗೂ ತಾಯಿ ಹುಲಿಯ ಇರುವಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ:-ಮೈಸೂರು ವಿ.ವಿ | ಅಂಕಪಟ್ಟಿ ನೀಡಿಲ್ಲವೆಂದು ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಅಂಕಪಟ್ಟಿ ವಿತರಣೆ

ಈ ಮಧ್ಯೆ ಅಕ್ಟೋಬರ್ 15ರಂದು ಬಿ.ಆರ್.ಟಿ. ಅರಣ್ಯ ವಿಭಾಗದ ವತಿಯಿಂದ ನೀಡಿದ ಮಾಧ್ಯಮ ಪ್ರಕಟಣೆ ಹಾಗೂ ಹುಲಿ ಮರಿ ಜೊತೆ ಕೆಲವರು ವಿಡಿಯೋ ಮಾಡಿರುವ ದೃಶ್ಯ ತುಣುಕು ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಮತ್ತು ಗೊಂದಲ ಇರುವುದರ ಜೊತೆಗೆ ತಾಯಿಹುಲಿ ಹತ್ಯೆ ಆಗಿರುವ ಸಂಶಯವೂ ಮೂಡಿರುವ ಕಾರಣ ಹಾಗೂ ಎನ್.ಜಿ.ಓ.ಗಳಿಗೆ ಬರುವ ಹಣ ದುರುಪಯೋಗದ ಆರೋಪವೂ ಇರುವುದರಿಂದ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವುದು ಸೂಕ್ತ ಎಂದು ಸಚಿವರು ಪರಿಗಣಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

2 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

2 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

2 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

3 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

3 hours ago