ಬೆಂಗಳೂರು : ಚಾಮರಾಜನಗರ, ಮಂಡ್ಯ, ಕೊಡಗು,ಹಾಸನ ಸೇರಿದಂತೆ ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಸಂಬಂಧ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.