Mysore
22
moderate rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ: ಮಾಜಿ ಸಂಸದೆ ರಮ್ಯಾ ಹೇಳಿದ್ದಿಷ್ಟು.!

ಬೆಂಗಳೂರು: ಅಧಿಕಾರ ಹಸ್ತಾಂತರ ವಿಚಾರವಾಗಿ ಎದ್ದಿರುವ ಗೊಂದಲಗಳ ಬಗ್ಗೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಅಂದರೆ ಹಾಗೆ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ ನಿರ್ಧಾರ ಮಾಡಬೇಕು. ಈ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅಧಿಕಾರ ಹಂಚಿಕೆ ಬಗ್ಗೆ ನಾನು ಡಿಸೈಡ್‌ ಮಾಡೋದಲ್ಲ. ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಸೀನಿಯರ್‌ ಲೀಡರ್‌ಗಳು, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಎಲ್ಲರೂ ತೀರ್ಮಾನ ಮಾಡುತ್ತಾರೆ. ಯಾರೇ ಸಿಎಂ ಆದರೂ ಓಕೆ. ರಾಜ್ಯಕ್ಕೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದಾರೆ.

Tags:
error: Content is protected !!