Mysore
26
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಜನರಿಗೆ ಅನ್ಯಾಯ ಮಾಡಿದ್ದಕ್ಕೆ ನೀವು ಕುಂಟುತ್ತಿದ್ದೀರಿ: ಸಿಎಂ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿನೋವಿಗೆ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದು, ನಮ್ಮ ಜನರಿಗೆ ನೀವು ಅನ್ಯಾಯ ಮಾಡಿದ್ದಕ್ಕೆ ಈಗ ಕುಂಟುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಮ್ಮವರ ಹಣ ದುರುಪಯೋಗ ಮಾಡಿಕೊಂಡಿದ್ದೀರಿ. 25 ಸಾವಿರ ಕೋಟಿ ದಲಿತರ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.

ದಲಿತರ ಹಣ ದುರುಪಯೋಗ ಮಾಡಿಕೊಂಡಿದ್ದಕ್ಕೆ ಇಂದು ವ್ಹೀಲ್‌ ಚೇರ್‌ನಲ್ಲೇ ಬರುವಂತಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಇನ್ನು ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!