ಬೆಂಗಳೂರು: ಯುವಕರು ಹಾಗೂ ಮಕ್ಕಳ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿರುವ ಛಲವಾದಿ ನಾರಾಯಣಸ್ವಾಮಿ ಅವರು, ಕೋವಿಡ್ ಸಂದರ್ಭದಲ್ಲಿ ಅನೇಕ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಿ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದೀರಿ. ಈಗಲೂ ಅಂತಹದ್ದೇ ಮಹತ್ವದ ನಿರ್ಧಾರ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಆನ್‌ಲೈನ್ ಗೇಮ್‌ಗಳಿಗೆ ಅಡಿಕ್ಟ್ ಆಗಿ ಅನೇಕ ಕುಟುಂಬಗಳು ಈಗ ಬೀದಿಗೆ ಬಂದಿವೆ. ಆನ್‌ಲೈನ್ ಗೇಮ್ ಮಾಲೀಕರು ಇದರಿಂದ ಲಾಭ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಆದಷ್ಟು ಬೇಗ ಕಡಿವಾಣ ಹಾಕಿ ಎಂದು ಮನವಿ ಮಾಡಿದ್ದಾರೆ. ನಿಮ್ಮ ಕಠಿಣ ನಿರ್ಧಾರದಿಂದ ನಮ್ಮ ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಒಳಿತಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.