Mysore
20
mist

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಮುಸಲ್ಮಾನ ಗುತ್ತಿಗೆದಾರರಿಗೆ ಮೀಸಲಾತಿ ವಿಚಾರ| ರಾಜ್ಯ ಸರ್ಕಾರದಲ್ಲಿರುವ ಹಿಂದೂಗಳಿಂದ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಸ್ಮಲಾನರಿಂದ ದೇಶಕ್ಕೆ ಗಂಡಾಂತರ ಬರುತ್ತದೆ ನಾನು ಹೇಳುತ್ತಿಲ್ಲ, ಆದರೆ ರಾಜ್ಯ ಸರ್ಕಾರದಲ್ಲಿ ಮುಸಲ್ಮಾನ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.16) ರಾಜ್ಯ ಸರ್ಕಾರದಿಂದ ಮುಸಲ್ಮಾನರಿಗೆ ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸಲ್ಮಾನರಿಗೆ ಈ ಹಿಂದೆಯೂ ಶೇ.4% ಮೀಸಲಾತಿ ಇತ್ತು. ಆದರೆ ಸಂವಿಧಾನ ಪ್ರಕಾರ ಧಾರ್ಮಿಕ ಮೀಸಲಾತಿ ನೀಡಲು ಅವಕಾಶವಿಲ್ಲ. ಹಾಗಾಗಿ ಬೊಮ್ಮಾಯಿ ಅವರು ಮುಖ್ಯಮಂತಿಯಾಗಿದ್ದಾಗ ಮುಸಲ್ಮಾನರ ಮೀಸಲಾತಿಯನ್ನು ಹಿಂಪಡೆಯಲಾಯಿತು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಸಲ್ಮಾನರಿಗೆ ಮೀಸಲಾತಿ ನೀಡುವುದಾಗಿ ತಿಳಿಸಿದ್ದರು. ಅಂತೆಯೇ ಈಗ ಗುತ್ತಿಗೆಯಲ್ಲೂ ಮೀಸಲಾತಿ ನೀಡಲು ಮುಂದಾಗಿದ್ದಾರೆ. ಹಾಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಬಿಜೆಪಿ ಪಕ್ಷ ಸದನ ಹೊರಗೆ ಹಾಗೂ ಒಳಗೆ ಪ್ರತಿಭಟನೆ ಮಾಡುತ್ತೇವೆ. ಅಲ್ಲದೇ ನಮ್ಮ ರಾಷ್ಟ್ರೀಯ ನಾಯಕರು ರಾಜ್ಯ ಸರ್ಕಾರದ ತೀರ್ಮಾನವನ್ನು ದೇಶ ವಿರೋಧಿ ನಡೆಯಾಗಿದೆ. ಜೊತೆಗೆ ಇದೊಂದು ಓಲೈಕೆ ರಾಜಕಾರಣವಾಗಿದ್ದು, ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.

Tags:
error: Content is protected !!