ಬೆಂಗಳೂರು: ಮುಸ್ಮಲಾನರಿಂದ ದೇಶಕ್ಕೆ ಗಂಡಾಂತರ ಬರುತ್ತದೆ ನಾನು ಹೇಳುತ್ತಿಲ್ಲ, ಆದರೆ ರಾಜ್ಯ ಸರ್ಕಾರದಲ್ಲಿ ಮುಸಲ್ಮಾನ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.16) ರಾಜ್ಯ ಸರ್ಕಾರದಿಂದ ಮುಸಲ್ಮಾನರಿಗೆ ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸಲ್ಮಾನರಿಗೆ ಈ ಹಿಂದೆಯೂ ಶೇ.4% ಮೀಸಲಾತಿ ಇತ್ತು. ಆದರೆ ಸಂವಿಧಾನ ಪ್ರಕಾರ ಧಾರ್ಮಿಕ ಮೀಸಲಾತಿ ನೀಡಲು ಅವಕಾಶವಿಲ್ಲ. ಹಾಗಾಗಿ ಬೊಮ್ಮಾಯಿ ಅವರು ಮುಖ್ಯಮಂತಿಯಾಗಿದ್ದಾಗ ಮುಸಲ್ಮಾನರ ಮೀಸಲಾತಿಯನ್ನು ಹಿಂಪಡೆಯಲಾಯಿತು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಸಲ್ಮಾನರಿಗೆ ಮೀಸಲಾತಿ ನೀಡುವುದಾಗಿ ತಿಳಿಸಿದ್ದರು. ಅಂತೆಯೇ ಈಗ ಗುತ್ತಿಗೆಯಲ್ಲೂ ಮೀಸಲಾತಿ ನೀಡಲು ಮುಂದಾಗಿದ್ದಾರೆ. ಹಾಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಬಿಜೆಪಿ ಪಕ್ಷ ಸದನ ಹೊರಗೆ ಹಾಗೂ ಒಳಗೆ ಪ್ರತಿಭಟನೆ ಮಾಡುತ್ತೇವೆ. ಅಲ್ಲದೇ ನಮ್ಮ ರಾಷ್ಟ್ರೀಯ ನಾಯಕರು ರಾಜ್ಯ ಸರ್ಕಾರದ ತೀರ್ಮಾನವನ್ನು ದೇಶ ವಿರೋಧಿ ನಡೆಯಾಗಿದೆ. ಜೊತೆಗೆ ಇದೊಂದು ಓಲೈಕೆ ರಾಜಕಾರಣವಾಗಿದ್ದು, ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…