Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಯ್ತು: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ 52,009 ಕೋಟಿ ರೂ ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಮತ್ತು ಸರ್ಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ದಲಿತ ಹಣ 25 ಸಾವಿರ ಕೋಟಿಯನ್ನೂ ನುಂಗಿದ್ದೀರಿ. 52 ಸಾವಿರ ಕೋಟಿಯನ್ನು ಬಜೆಟ್‌ನಲ್ಲಿ ಇಟ್ಟಿದ್ದೀರಿ. 6 ತಿಂಗಳಿನಿಂದ ಅಕ್ಕಿ ಕೊಡುವುದಕ್ಕೂ ತಿಲಾಂಜಲಿ ಹಾಡಿದ್ದಾರೆ. ಮನೆ ಒಡತಿಗೆ ಕೊಡುತ್ತಿದ್ದ 2 ಸಾವಿರ ರೂ ಬರುತ್ತಿಲ್ಲ. ಯುವನಿಧಿ ಮರೀಚಿಕೆಯಾಗಿದೆ. ಅದು ಯಾರಿಗೂ ಸಿಗುತ್ತಿಲ್ಲ. ಹಣ ಎಲ್ಲಿಗೆ ಹೋಗಿದೆ. ಇದು ಸಕಾಲಕ್ಕೆ ಜನರಿಗೆ ಯಾಕೆ ಸಿಗುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಜನರ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಕೊಟ್ಟ ಆಶ್ವಾಸನೆ ವಿಚಾರದಲ್ಲಿ ಜನರಿಗೆ ಮೋಸ ವಂಚನೆ ಮಾಡಿದ್ದೀರಿ. ಆ ಕಾರಣದಿಂದ ಗ್ಯಾರಂಟಿ ಅನುಷ್ಠಾನ ಆಗುತ್ತಿಲ್ಲ. ಅಕ್ಕಿ ಖರೀದಿಸಿದರೆ ಅದನ್ನು ಜನರಿಗೆ ಕೊಡಬೇಕು. ತೆಗೆದುಕೊಳ್ಳದೇ ಇದ್ದಲ್ಲಿ ಜನರಿಗೆ ಏನಾದರೂ ಸಬೂಬು ಹೇಳಬಹುದೆಂಬ ಚಿಂತನೆ ಸರ್ಕಾರದ್ದು ಎಂದು ಕಿಡಿಕಾರಿದರು.

Tags: