ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಹತ್ಯೆ ಪ್ರಕರಣ ಕೇವಲ ಆತ್ಮಹತ್ಯೆಯಲ್ಲ, ರಾಜಕೀಯ ದುರರುದ್ದೇಶದಿಂದ ನಡೆದ ಹತ್ಯೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರು ಅವರು, ಮಡಿಕೇರಿಯ ನಮ್ಮ ನಿಷ್ಠಾವಂತ ಬಿಜೆಪಿ ಕಾರ್ಯಕರ್ತ ವಿನಯ್ ಇವರು ಮಾನಸಿಕ ಚಿತ್ರಹಿಂಸೆಗೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಅತ್ಯಂತ ದುಃಖದ ವಿಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಶಾಸಕರ ಕುಮಕ್ಕಿನಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು, ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ದಾಖಲಿಸಿ, ಚಿತ್ರಹಿಂಸೆ ನೀಡಲಾಗಿದೆ. ಇದರ ಪರಿಣಾಮವಾಗಿ ವಿನಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಖಂಡನಾರ್ಹವಾಗಿದೆ ಎಂದು ಹೇಳಿದ್ದಾರೆ.
ಇದು ಕೇವಲ ಆತ್ಮಹತ್ಯೆ ಅಲ್ಲ — ರಾಜಕೀಯ ದುರುದ್ದೇಶದಿಂದ ನಡೆದ ಹತ್ಯೆ, ಈ ಘಟನೆಯ ಪೂರ್ಣ ತನಿಖೆ ನಡೆಯಬೇಕು. ಹೊಣೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಿಂದ ನಮ್ಮ ಬಿಜೆಪಿ ಪಕ್ಷ ತಮಗೆ ನ್ಯಾಯ ಒದಗಿಸುವವರೆಗೆ ಹೋರಾಟ ಕೈಬಿಡದು ಎಂದಿದ್ದಾರೆ.




