ರಾಜ್ಯ

ವಿನಯ್‌ ಆತ್ಮಹತ್ಯೆ ಪ್ರಕರಣ| ಇದು ಕೇವಲ ಆತ್ಮಹತ್ಯೆ ಅಲ್ಲ, ರಾಜಕೀಯ ದುರುದ್ದೇಶದಿಂದ ನಡೆದ ಹತ್ಯೆ:ಛಲವಾದಿ ನಾರಾಯಣ ಸ್ವಾಮಿ

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆ ಪ್ರಕರಣ ಕೇವಲ ಆತ್ಮಹತ್ಯೆಯಲ್ಲ, ರಾಜಕೀಯ ದುರರುದ್ದೇಶದಿಂದ ನಡೆದ ಹತ್ಯೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರು ಅವರು, ಮಡಿಕೇರಿಯ ನಮ್ಮ ನಿಷ್ಠಾವಂತ ಬಿಜೆಪಿ ಕಾರ್ಯಕರ್ತ ವಿನಯ್ ಇವರು ಮಾನಸಿಕ ಚಿತ್ರಹಿಂಸೆಗೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಅತ್ಯಂತ ದುಃಖದ ವಿಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಶಾಸಕರ ಕುಮಕ್ಕಿನಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು, ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ದಾಖಲಿಸಿ, ಚಿತ್ರಹಿಂಸೆ ನೀಡಲಾಗಿದೆ. ಇದರ ಪರಿಣಾಮವಾಗಿ ವಿನಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಖಂಡನಾರ್ಹವಾಗಿದೆ ಎಂದು ಹೇಳಿದ್ದಾರೆ.

ಇದು ಕೇವಲ ಆತ್ಮಹತ್ಯೆ ಅಲ್ಲ — ರಾಜಕೀಯ ದುರುದ್ದೇಶದಿಂದ ನಡೆದ ಹತ್ಯೆ, ಈ ಘಟನೆಯ ಪೂರ್ಣ ತನಿಖೆ ನಡೆಯಬೇಕು. ಹೊಣೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಿಂದ ನಮ್ಮ ಬಿಜೆಪಿ ಪಕ್ಷ ತಮಗೆ ನ್ಯಾಯ ಒದಗಿಸುವವರೆಗೆ ಹೋರಾಟ ಕೈಬಿಡದು ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

14 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

14 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

20 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

21 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

21 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

21 hours ago