ರಾಜ್ಯ

ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು: ಛಲವಾದಿ ನಾರಾಯಣ ಸ್ವಾಮಿ ಆಗ್ರಹ

ಬೆಂಗಳೂರು: ಕಲಬುರ್ಗಿಯ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟ ಸ್ಥಾನದಿಂದ ಕೈ ಬಿಡಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.28) ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಬುರ್ಗಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅಟ್ಟಹಾಸ ಮಿತಿ ಮೀರಿದೆ. ತನ್ನ ಆಪ್ತರ, ಬೆಂಬಲಿಗರ ಮೂಲಕ ಮರಳು, ಟೈಲ್ಸ್‌ ಸೇರಿದಂತೆ ಎಲ್ಲಾ ರೀತಿಯ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಕಲಬುರ್ಗಿ ಜಿಲ್ಲೆ ರಿಪಬ್ಲಿಕ್‌ ಆಫ್‌ ಕಲಬುರ್ಗಿ ಆಗಿದ್ದು, ಅಲ್ಲಿ ಅವರ ಆಡಳಿತ ವೈಖರಿಯೇ ಬೇರೆಯಾಗಿದೆ. ಹೀಗಾಗಿ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಿಯಾಂಕ್‌ ಖರ್ಗೆ ಅವರು ಕಲಬುರ್ಗಿ ಜಿಲ್ಲೆಯಲ್ಲಿ ತಮಗೆ ಬೇಕಾದವರನ್ನು ನೇಮಿಸಿಕೊಂಡು ದಂಧೆಗಳಲ್ಲಿ ತೊಡಗಿಸಿದ್ದಾರೆ. ಹಾಗಾಗಿ ಗುತ್ತಿಗಾರ ಸಚಿನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹುಶಃ ಮೃತ ಸಚಿನ್‌ಗೆ ಧೈರ್ಯ ಸಾಕಾಗಿಲ್ಲ ಎಂದೆನಿಸುತ್ತದೆ. ಆ ಕಾರಣಕ್ಕೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

2 mins ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

7 mins ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

16 mins ago

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

11 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

12 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

12 hours ago