ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶವಿಲ್ಲ. ಕಾಂಗ್ರೆಸ್‌ನವರು ಗುತ್ತಿಗೆಯಲ್ಲೂ ಮೀಸಲಾತಿ ಕೊಟ್ಟಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡೇ ಮಾಡುತ್ತೇವೆ. ಸರ್ಕಾರ ಒಂದು ಸಮುದಾಯವನ್ನು ಓಲೈಸುವ ಕೆಲಸ ಮಾಡುತ್ತಿದೆ. ಇದು ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಒಳಮೀಸಲಾತಿಯನ್ನು ಪರಿಶಿಷ್ಟ ವರ್ಗಕ್ಕೆ ಕೊಡಲೇಬೇಕು. ತೆಲಂಗಾಣದಲ್ಲಿ ಈಗಾಗಲೇ ಘೋಷಣೆ ಆಗಿದೆ. ಆದರೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಈ ಬಗ್ಗೆ ಬೇಗ ಸರ್ಕಾರ ತೀರ್ಮಾನ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಬೆಂಗಳೂರು: ನಟಿ ರನ್ಯಾಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಚಿವರ ಸಹಕಾರವಿದೆ ಎಂಬ ಯತ್ನಾಳ್ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ…
ರಮೇಶ್ ಪಿ. ರಂಗಸಮುದ್ರ ಕೃಷಿಯಲ್ಲಿ ಖರ್ಚು ಹೆಚ್ಚಾಗಿದ್ದು, ಆದಾಯ ಕಡಿಮೆಯಾಗಿದೆ. ಜತೆಗೆ ಕೃಷಿ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಮಾರುಕಟ್ಟೆ…
ಸುತ್ತೂರು ನಂಜುಂಡ ನಾಯಕ ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ…
ಕೆಲವೇ ಕಾಲದ ಅಂತರದಲ್ಲಿ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಕೇಳಿ ಬರುತ್ತಿದೆ. ಅಂದ…
ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಅದೇ…
ಕೇಂದ್ರ ಸರ್ಕಾರದಿಂದ ೫೫. ೧೪ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ ಕೆ. ಬಿ. ರಮೇಶನಾಯಕ ಮೈಸೂರು: ಸ್ವಾತಂತ್ರ್ಯ ಬಂದು…