ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಬಾದಾಮಿಯಲ್ಲಿ ಚಾಲುಕ್ಯ ಉತ್ಸವ ನಡೆಯುತ್ತಿರುವ ಬಗ್ಗೆ ಮಾತನಾಡುತ್ತಾ, ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವ ಕಳೆದು ಹತ್ತು ವರ್ಷಗಳಿಂದ ನಡೆದಿರಲಿಲ್ಲ. ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವವನ್ನು ಆಯೋಜಿಸಲಾಗಿದ್ದು, ಸಂತೋಷದಿಂದ ಭಾಗವಹಿಸುತ್ತಿರುವುದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಸರ್ಕಾರದ ಅವಧಿಯಲ್ಲಿಯೇ ಬಾದಾಮಿಯ ಆಭಿವೃದ್ಧಿ
ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರೆಸಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಮೇಣದಬಸದಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವರು ಕ್ಲಿಯರೆನ್ಸ್ ನೀಡಿದ್ದು, ಯೋಜನೆಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ಇಲ್ಲಿನ ಆಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…