Mysore
25
overcast clouds

Social Media

ಭಾನುವಾರ, 16 ಮಾರ್ಚ್ 2025
Light
Dark

ರನ್ಯಾರಾವ್‌ ಕೇಸ್‌ನಲ್ಲಿ ಸಚಿವರ ಕೈವಾಡ ಆರೋಪ: ಬಿಜೆಪಿಗೆ ಟಾಂಗ್‌ ನೀಡಿದ ಚಲುವರಾಯಸ್ವಾಮಿ

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್‌ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ ಕೆಲಸ ಮಾಡಿದ್ದಾರೆ. ಅವರು ಇಲ್ಲಿಯವರೆಗೂ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ಸಲಹೆ ನೀಡಿಲ್ಲ. ಯಾವಾಗಲೂ ಟೀಕೆ-ಟಿಪ್ಪಣಿಯನ್ನೇ ಮಾಡುತ್ತಾರೆ. ಈ ಹಿಂದೆ ಯಾವ್ಯಾವ ವಿಚಾರಗಳನ್ನು ಹೇಳಿದ್ದರೂ ಅವೆಲ್ಲವೂ ಹುಸಿಯಾಗಿದೆ. ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ಸಂಬಂಧ ಮೊದಲು ಸಿಬಿಐ ತನಿಖೆ ನಡೆಸಲಿ, ಬಳಿಕ ಸತ್ಯಾ ಗೊತ್ತಾಗಲಿದೆ. ಹೀಗಾಗಿ ವಿರೋಧ ಪಕ್ಷದವರಿಗೆ ಸ್ಪಷ್ಟತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ಶಾಸಕ ಭರತ್‌ ಶೆಟ್ಟಿ ಹೇಳಿಕೆ ಏನು?

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನವಾದ ಬೆನ್ನಲ್ಲೇ ಸಚಿವರಿಬ್ಬರಿಗೆ ಕರೆ ಮಾಡಿದ್ದಾರೆ ಎಂಬ ವಿಚಾರ ಹೊರ ಬಿದ್ದಿರುವ ವಿಚಾರ ಗೊತ್ತಾಗಿದೆ. ಅಲ್ಲದೇ ಮೂವರು ಸಚಿವರ ಸಂಪರ್ಕದ ಬಗ್ಗೆಯೂ ಮಾತನಾಡುತ್ತಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದೆ, ಅದರಿಂದ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದ್ದರು.

Tags: