ಬೆಂಗಳೂರು: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ ಕೆಲಸ ಮಾಡಿದ್ದಾರೆ. ಅವರು ಇಲ್ಲಿಯವರೆಗೂ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ಸಲಹೆ ನೀಡಿಲ್ಲ. ಯಾವಾಗಲೂ ಟೀಕೆ-ಟಿಪ್ಪಣಿಯನ್ನೇ ಮಾಡುತ್ತಾರೆ. ಈ ಹಿಂದೆ ಯಾವ್ಯಾವ ವಿಚಾರಗಳನ್ನು ಹೇಳಿದ್ದರೂ ಅವೆಲ್ಲವೂ ಹುಸಿಯಾಗಿದೆ. ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ಸಂಬಂಧ ಮೊದಲು ಸಿಬಿಐ ತನಿಖೆ ನಡೆಸಲಿ, ಬಳಿಕ ಸತ್ಯಾ ಗೊತ್ತಾಗಲಿದೆ. ಹೀಗಾಗಿ ವಿರೋಧ ಪಕ್ಷದವರಿಗೆ ಸ್ಪಷ್ಟತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿಕೆ ಏನು?
ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನವಾದ ಬೆನ್ನಲ್ಲೇ ಸಚಿವರಿಬ್ಬರಿಗೆ ಕರೆ ಮಾಡಿದ್ದಾರೆ ಎಂಬ ವಿಚಾರ ಹೊರ ಬಿದ್ದಿರುವ ವಿಚಾರ ಗೊತ್ತಾಗಿದೆ. ಅಲ್ಲದೇ ಮೂವರು ಸಚಿವರ ಸಂಪರ್ಕದ ಬಗ್ಗೆಯೂ ಮಾತನಾಡುತ್ತಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದೆ, ಅದರಿಂದ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದ್ದರು.
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…