ಮೈಸೂರು: ರಾಜ್ಯದ ಹಲವೆಡೆ ಫೆ.1 ರಿಂದ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲೂ ಸಾಧಾರಣೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.