ಮೈಸೂರು: ಮೈಸೂರು ಸೇರಿದಂತೆ ರಾಜ್ಯದ ವಿವಿದೆಡೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ. ಮೈಸೂರು, ಬೆಂಗಳೂರು, ಮಂಡ್ಯ, ಕೊಡಗು ಭಾಗಗಳಲ್ಲಿ ನವೆಂಬರ್ ೨೯ರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದ್ದಾರೆ.




