ರಾಜ್ಯ

ಡಿವೋರ್ಸ್‌ ಬಗ್ಗೆ ಸ್ಪಷ್ಟನೆ ನೀಡಿದ ಚಂದನ್‌ ಶೆಟ್ಟಿ, ನಿವೇದಿತಾ ಗೌಡ

ಬೆಂಗಳೂರು: ಚಂದನವನದ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಜೂನ್‌ 7 ರಂದು ಕಾನೂನಾತ್ಮಕವಾಗಿ ಡಿವೋರ್ಸ್‌ ಪಡೆದಿದ್ದರು. ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಡಿವೋರ್ಸ್‌ ಪಡೆದು ದೂರಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಡಿವೋರ್ಸ್‌ ಬಗ್ಗೆ ಹಲವು ವದಂತಿಗಳು, ಊಹಾಪೋಹಗಳು ಹರಿದಾಡಿದ್ದವು. ಈ ಬಗ್ಗೆ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಇಂದು(ಜೂ.10) ಜಂಟಿ ಸುದ್ದಿಗೋಷ್ಠಿ ನಡೆಸಿ ಡಿವೋರ್ಸ್‌ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಂದನ್‌ ಶೆಟ್ಟಿ, ನಮ್ಮ ಇಬ್ಬರ ನಡುವೆ ಹೊಂದಾಣಿಕೆ ಇಲ್ಲದೇ ಡಿವೋರ್ಸ್‌ ಪಡೆದಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಬೇಡದ ಸುಳ್ಳು ಸುದ್ದಿಗಳನ್ನು ಕೆಲವರು ಸೃಷ್ಟಿಸಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಲು ಮಾಧ್ಯಮದ ಮುಂದೆ ಬಂದಿದ್ದೇವೆ. ನನ್ನ ಆಲೋಚನೆ, ಜೀವನ ಶೈಲಿ ಹಾಗೂ ನಿವೇದಿತಾ ಅವರ ಜೀವನ ಶೈಲಿ ಬೇರೆ ಇತ್ತು. ಜೀವನದ ಬಗ್ಗೆ ನಾವಿಬ್ಬರು ಬೇರೆಯದ್ದೇ ದಾರಿಯಲ್ಲಿದ್ದೇವೆ. ಅದು ಹೊಂದಾಣಿಕೆ ಆಗಲಿಲ್ಲ. ಹೊಂದಿಕೊಳ್ಳಲು ಪ್ರಯತ್ನಿಸಿದ್ದರು ಹೊಂದಾಣಿಕೆ ಆಗಲಿಲ್ಲ. ಪದೇ ಪದೇ ಮನಸ್ತಾಪ ಆದಾಗ ಒಟ್ಟಿಗೇ ಇರೋದು ಸರಿಯಲ್ಲ ಎಂದು ಒಮ್ಮತದಿಂದ ಡಿವೋರ್ಸ್‌ ನಿರ್ಧಾರಕ್ಕೆ ಬಂದೆವು ಎಂದು ಚೆಂದನ್ ಶೆಟ್ಟಿ ಹೇಳಿದರು. ಈ ಮಾತಿಗೆ ನಿವೇದಿತಾ ಗೌಡ ಅವರು ಕೂಡ ದನಿಗೂಡಿಸಿದರು.

ಮುಖ್ಯವಾಗಿ ಮೂರು ವದಂತಿಗಳು ನಮಗೆ ಬೇಸರ ತರಿಸಿವೆ. ಮೊದಲಿಗೆ ನಿವೇದಿತಾ ಗೌಡ ಹೆಸರಿನೊಂದಿಗೆ ಇನ್ನೊಬ್ಬರ ಹೆಸರು ತಳುಕು ಹಾಕಿಕೊಂಡಿರುವುದ ಬಹಳ ಬೇಸರವಾಯಿತು. ಆ ವ್ಯಕ್ತಿ ಮನೆಗೆ ನಾನು ಸಾಕಷ್ಟು ಬಾರಿ ಹೋಗಿದ್ದೇನೆ. ಅವರ ಕುಟುಂಬದ ಕಾರ್ಯಕ್ರಮಗಳಿಗೆ ಹೋಗಿದ್ದೇವೆ. ಅವರ ಕುಟುಂಬದೊಂದಿಗೆ ಬೆರೆಯುವುದು ಸಂತೋಷದ ವಿಷಯ. ಆದರೆ ಆ ವ್ಯಕ್ತಿ ಜೊತೆ ನಿವೇದಿತಾಗೆ ಸಂಬಂಧ ಇದೆ ಎಂದು ಹೇಳುವ ವಿಕೃತ ಮನಸ್ಥಿತಿ ನಮ್ಮ ಕನ್ನಡಿಗರಾದ್ದಾಗಿರಬಾರದು ಎಂದು ಚಂದನ್‌ ಶೆಟ್ಟಿ ನೊಂದುಕೊಂಡು ಮಾತನಾಡಿದರು.

ನಿವೇದಿತಾ ಡಿವೋರ್ಸ್‌ ಬಳಿಕ ಜೀವನಾಂಶ ಕೇಳಿದ್ದಾರೆ ಎನ್ನುವುದು ಸುಳ್ಳು, ಅವರು ಯಾವುದೇ ಜೀವನಾಂಶ ಕೇಳಿಲ್ಲ, ನಾನು ಕೊಟ್ಟಿಲ್ಲ. ಇನ್ನೂ ನಾವಿಬ್ಬರು ಮಗು ಮಾಡಿಕೊಳ್ಳುವ ವಿಚಾರಕ್ಕೆ ಡಿವೋರ್ಸ್‌ ಪಡೆದೆವು ಎನ್ನುವ ವದಂತಿ ಇದೆ. ಇದು ಕೂಡ ಸುಳ್ಳು ಎಂದು ಸ್ಪಷ್ಟನೆ ನೀಡಿದರು.

ನಿವೇದಿತಾ ಗೌಡ ಮಾತನಾಡಿ, ಆ ರೀತಿಯ ಪೋಸ್ಟ್‌ಗಳನ್ನು ನೋಡಿ, ನನಗೆ ಬೇಸರವಾಯಿತು. ನಾವು ಫ್ಯಾಮಿಲಿ ಫ್ರೆಂಡ್ಸ್‌, ನಮ್ಮ ಕುಟುಂಬ ಹಾಗೂ ಅವರ ಕುಟುಂಬದ ನಡುವೆ ಉತ್ತಮ ಒಡನಾಟವಿದೆ. ಆದರೆ ಯಾಕೆ ಈ ರೀತಿಯ ಪೋಸ್ಟ್‌ ಹರಿದಾಡುತ್ತಿವೆ ಎಂದು ತಿಳಿಯುತ್ತಿಲ್ಲ. ಅವರಿಗೂ ಫ್ಯಾಮಿಲಿ, ಮಕ್ಕಳು ಇದ್ದಾರೆ. ಬೇಸರ ಮಾಡಬೇಡಿ, ಅದು ಎಲ್ಲರಿಗೂ ಬಹಳ ನೋವಾಗುತ್ತೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…

11 hours ago

ಅಭಿಮನ್ಯು ಆನೆ ಮಾವುತನ ಪತ್ನಿ ಸಾವು

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…

12 hours ago

ಮತದಾರರ ಹೆಸರು ಡಿಲೀಟ್‌ ವಿವಾದ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’…

12 hours ago

ಹೆಣ ಇದ್ದ ಸ್ಕಾರ್ಪಿಯೋ ಓಡಿಸಲು ಯಾರೂ ಸಿದ್ಧರಿಲ್ಲ

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…

14 hours ago

ರೇಣುಕಾಸ್ವಾಮಿಯ ಹೆಣ ಬಿಸಾಡಲು ಜಾಗ ಹುಡುಕಾಟ

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…

14 hours ago

ನೋಟಿನ ಕಂತೆಗಳನ್ನು ತಂದಿಟ್ಟ ದರ್ಶನ್

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…

15 hours ago