ರಾಜ್ಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ನಾಯಕರನ್ನು ಕೂರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಬಣದ ನಾಯಕರು ಆಗಾಗ್ಗೆ ಚರ್ಚೆ ನಡೆಸುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಡಿನ್ನರ್‌ ಮೀಟಿಂಗ್‌ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಈ ಬೆನ್ನಲ್ಲೇ ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನವೇ ಅಂತಿಮ. ಇದನ್ನು ಅವರೇ ತೀರ್ಮಾನ ಮಾಡುತ್ತಾರೆ ಎಂದರು.

ಇನ್ನು ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ಇನ್ನು ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಊಟಕ್ಕೆ ಸೇರುವುದೇ ತಪ್ಪೇ ಎಂದು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಅನೇಕ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

25 mins ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

35 mins ago

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…

48 mins ago

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

3 hours ago

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

14 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

14 hours ago