ರಾಜ್ಯ

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ತಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಅದರಂತೆ ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ ಎಂದು ತಿಳಿಸಿರುವ ಸಚಿವರು ಹೊಸ ಬಹುಮಹಡಿ (ಅಪಾರ್ಟ್ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ಕಲ್ಪಸಿಕೊಡುವ ಮೂಲಕ ತ್ವರಿತ ಸೇವೆಗೆ ಅವಕಾಶ ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತುಸೆಂಟ್ಸ್ ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದೂ ಸಚಿವರು ಹೇಳಿದ್ದು, ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮತ್ತು ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಮುಂದಿನ 10 ದಿನದೊಳಗೆ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,16,296 ಅರ್ಜಿಗಳು ಸ್ವೀಕೃತವಾಗಿವೆ, ಪ್ರಸ್ತುತ, 4,705 ಅರ್ಜಿಗಳು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ ಲಾಗಿನ್ನಲ್ಲಿ, 12,378 ಅರ್ಜಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಲಾಗಿನ್ನಲ್ಲಿ, 3,069 ಅರ್ಜಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರ ಲಾಗಿನ್ನಲ್ಲಿ ಹಾಗೂ 883 ಅರ್ಜಿಗಳು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಲಾಗಿನ್ನಲ್ಲಿ ಅನುಮೋದನೆಗಾಗಿ ಬಾಕಿ ಇವೆ. ಈ ರೀತಿ, ವಿವಿಧ ಹಂತಗಳಲ್ಲಿ ಒಟ್ಟು 21,035 ಅರ್ಜಿಗಳು ಅನುಮೋದನೆಗಾಗಿ ಬಾಕಿ ಇರುತ್ತವೆಯಲ್ಲದೆ, ಇದುವರೆಗೆ ಇ-ಸ್ವತ್ತು 2.0 ತಂತ್ರಾಂಶದಡಿ ಒಟ್ಟು 95,261 ಅರ್ಜಿಗಳು ಅನುಮೋದನೆಗೊಂಡು ವಿಲೇವಾರಿ ಮಾಡಲಾಗಿದೆ ಎಂಬ ವಿವರಗಳನ್ನು ಸಚಿವರು ನೀಡಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭದಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿರುವ ಸಚಿವರು ಕೇಂದ್ರ ಸರ್ಕಾರ ನಿರ್ವಹಿಸುತ್ತಿರುವ ಎನ್.ಐ.ಸಿ (NIC) ತಂತ್ರಾಂಶದಲ್ಲಿನ ತೊಡಕುಗಳಿಂದ ಇ-ಸ್ವತ್ತು ಮಂಜಾರಾತಿಯಲ್ಲಿ ವಿಳಂಬವಾಗುತ್ತಿದ್ದು, ಈಗಾಗಲೆ ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ಸಚಿವರಿಗೆ ಪತ್ರ ಬರೆದು, ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ ಮಾಡ್ಯುಲ್ ಗಳನ್ನು ಆದ್ಯತೆ ಮೇರೆಗೆ ಅಭಿವೃದ್ದಿಪಡಿಸಲು ಕೋರಲಾಗಿದೆ ಎಂದಿದ್ದಾರೆ.

ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ, ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು ಸಮಸ್ಯೆ / ಸಂದೇಹಗಳನ್ನು ಬಗೆಹರಿಸಲು ಸರ್ಕಾರ ಬದ್ದವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸಹಕರಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಹಾಯಕ್ಕಾಗಿ ಇಲಾಖೆಯಿಂದಸಹಾಯವಾಣಿ (9483476000) ಪ್ರಾರಂಭಿಸಲಾಗಿದೆ. ಇ-ಸ್ವತ್ತು 2.0 ರಡಿ ಅರ್ಜಿ ಸಲ್ಲಿಸಲು, ಸಂಬಂಧಿತ ದಾಖಲಾತಿ / ಪ್ರಕ್ರಿಯೆಯಲ್ಲಿ / ತಂತ್ರಾಂಶದ ಬಳಕೆಯ ಕುರಿತು ಸಂದೇಹಗಳಿದ್ದಲ್ಲಿ ತಮ್ಮ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು https://eswathu.karnataka.gov.in/Login.aspx  ರಲ್ಲಿ “ಸಂಪರ್ಕಿಸಿ” ಶೀರ್ಷಿಕೆಯಡಿ ಹಾಗೂ  https://panchatantra.karnataka.gov.in ರಲ್ಲಿ ಪ್ರಕಟಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

5 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

6 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

6 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

7 hours ago