ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನು ಇಂದು ಅಂತಿಮಗೊಳಿಸಲಾಗುವುದು ಮಾಡಲಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ಆಕಾಂಕ್ಷಿ ಅಂತ ಎಂದಿಗೂ, ಎಲ್ಲಿಯೂ ಸಹ ಹೇಳಿಲ್ಲ. ಕಾರ್ಯಕರ್ತರಿಗೆ ಟಿಕೆಟ್ ನೀಡಲು ಸೂಕ್ತವೆಂದು ನನ್ನ ಅನಿಸಿಕೆಯಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ ಟಕೆಟ್ ನೀಡಿದರೆ ಸೂಕ್ತ. ಇದು ನನ್ನ ಬೂಟಾಟಿಕೆ ಮಾತಲ್ಲ ಎಂದು ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಸೇರಿ ಇಂದು ಸಂಜೆ ಸಭೆ ನಡೆಸಿ ತೀರ್ಮಾನಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದರು.