ರಾಜ್ಯ

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿಗೆ ಕ್ಷೇತ್ರಬಿಟ್ಟು ಕೊಡುವ ಒಪ್ಪಂದವಾಗಿಲ್ಲ; ಎಚ್‌ಡಿಕೆ

ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಗೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಯೋಗೇಶ್ವರ್ ಅವರಿಗೆ ಅಥವಾ ಇನ್ನಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜತೆ ಒಪ್ಪಂದವಾಗಿರಲಿಲ್ಲ ಎಂಬ ಅಂಶವನ್ನು ಇಟ್ಟು ಹೇಳಿದರು.

ಚುನಾವಣೆ ಸಮೀಪಿಸುತ್ತಿದೆ. ಆವತ್ತು ಏನೇನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ ಎಂದುಹೇಳಿದರು.

ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ ಸಿಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು. ಅದಕ್ಕೂ ಮೊದಲು ನಾನು ಸಿ.ಪಿ.ಯೋಗೇಶ್ವರ್ ಅವರೇ ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿ ಆಗಬೇಕು ಎಂದು ಹೇಳಿದ್ದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಪದೇಪದೆ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಅಂದಿನ ಬೆಳವಣಿಗೆಗಳ ಮೇಲೆ ಬೆಳಕು ಚೆಲ್ಲಿದರು.

ಚನ್ನಪಟ್ಟಣ ಜೆಡಿಎಸ್‌ ಭದ್ರಕೋಟೆ
ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು. ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್ ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್ ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ. ಈ ಮಾತನ್ನು ನಾನು ಯೋಗೇಶ್ವರ್ ಅವರಿಗೆ ಹೇಳಿದ್ದೇನೆ ಎಂಬುದಾಗಿ ಹೇಳಿದರು.

ಮೈತ್ರಿಗೆ ಮೂಲ ಕಾರಣರು ಯಾರು ಎಂಬುದನ್ನು ನಾನು ಬೀದಿಯಲ್ಲಿ ಚರ್ಚೆ ಮಾಡಲಾರೆ. ಹಾಗೆ ಮಾಡುವುದು ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದಂತೆಯೇ. ಯೋಗೇಶ್ವರ್ ಅವರು ಮೈತ್ರಿ ಬಗ್ಗೆ ಯಾರ ಜತೆ ಚರ್ಚೆ ನಡೆಸಿದ್ದರು ಎಂಬುದು ನನಗೆ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಅಭ್ಯರ್ಥಿ ಆಗಬೇಕು ಎಂದ ಯೋಗೇಶ್ವರ್ ಅವರು ಒಮ್ಮೆ ನನ್ನ ಬಳಿ ಬಂದಿದ್ದರು. ದೆಹಲಿಯಲ್ಲಿ ಚರ್ಚೆ ಮಾಡಿದ್ದರು. ಹಾಗಿದ್ದರೆ ತಾವು ಕ್ಷೇತ್ರದಲ್ಲಿನ ನಮ್ಮ ಮುಖಂಡರ ಜತೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದೆ. ಆಮೇಲೆ ನಡೆದಿದ್ದು ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿಯೂ ಅಭ್ಯರ್ಥಿ ಆಗಬೇಕು ಎಂದು ಅನೇಕ ನಾಯಕರು ಇದ್ದಾರೆ ಎಂದು ಅವರು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಗೆ ನಿಲ್ಲಬೇಕು ಅಥವಾ ನಿಲ್ಲಿಸಬೇಕು ಎಂಬ ಬಗ್ಗೆ ಈ ಕ್ಷಣದವರೆಗೂ ಚರ್ಚೆ ನಡೆದಿಲ್ಲ, ನಾನು ತೀರ್ಮಾನ ಮಾಡಿಲ್ಲ. ನನ್ನ ಉದ್ದೇಶ ಇಲ್ಲಿ ಕಾಂಗ್ರೆಸ್ ಸೋಲಬೇಕು, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಬೇಕು. ಈ ಹಿನ್ನೆಯಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಎರಡೂ ಪಕ್ಷಗಳ ರಾಷ್ಟ್ರ, ರಾಜ್ಯ ನಾಯಕರು ಕೂತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

14 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago