Mysore
17
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಚನ್ನಪಟ್ಟಣ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಣಕ್ಕೆ ನಿಖಿಲ್‌ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿದ್ದು, ಇಂದು ( ಅಕ್ಟೋಬರ್‌ 25 ) ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನ ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಿದ್ದಾರೆ. ಈ ರೋಡ್‌ ಶೋನಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಸಾಥ್‌ ನೀಡಿದ್ದಾರೆ. ಅನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಚನ್ನಪಟ್ಟಣ ಮಿನಿ ಸಮರದ ಚುನಾವಣಾ ಕಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ವಿರುದ್ಧ ಮುಖಾಮುಖಿಯಾಗಲು ಸಜ್ಜಾಗಿದ್ದಾರೆ.

ಈ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಾಥ್‌ ನೀಡಿದ್ದಾರೆ.

Tags:
error: Content is protected !!