ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಣಕ್ಕೆ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿದ್ದು, ಇಂದು ( ಅಕ್ಟೋಬರ್ 25 ) ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ಈ ರೋಡ್ ಶೋನಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಅನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಚನ್ನಪಟ್ಟಣ ಮಿನಿ ಸಮರದ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಮುಖಾಮುಖಿಯಾಗಲು ಸಜ್ಜಾಗಿದ್ದಾರೆ.
ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಥ್ ನೀಡಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…