ರಾಜ್ಯ

ಚನ್ನಪಟ್ಟಣ ಉಪ ಚುನಾವಣೆ: ಇಂದು ಮಧ್ಯಾಹ್ನ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ನಿಖಿಲ್‌ ಕುಮಾರಸ್ವಾಮಿ ಇಂದು(ಅ.25) ಮಧ್ಯಾಹ್ನ 1.30ಕ್ಕೆ  ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಆಯ್ಕೆಯಾಗಿದ್ದು, ಅಧಿಕೃತವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿಖಿಲ್‌ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.

ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬೃಹತ್‌ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್‌ ಹೇಳಿದ್ದೇನು?
ಜೆ.ಪಿ.ನಗರದ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆಯಲ್ಲಿ ಸೋಲು ಗೆಲ್ಲುವೂ ಸರ್ವೇ ಸಾಮಾನ್ಯ. ಈ ಹಿಂದೆ ಎರಡೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ಬಾರಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಹೀಗಾಗಿ ಮೋದಿ ಅವರ ವಿಶ್ವಾಸಗಳಿಸುವ ಪ್ರಯತ್ನ ಮಾಡುತ್ತೇನೆ ಎಂದರು. ಕಳೆದ ಎರಡೂ ಬಾರಿಯಂತೆ ಈ ಬಾರಿಯೂ ಚಕ್ರವ್ಯೂಹ ಸಿದ್ಧವಾಗಿದೆ. ಇದನ್ನು ಬೇಧಿಸುವ ಶಕ್ತಿಯನ್ನು ಮೈತ್ರಿ ಪಕ್ಷದ ಕಾರ್ಯಕರ್ತರು ನೀಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

1 hour ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

4 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

9 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

9 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

9 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

9 hours ago