Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಚನ್ನಪಟ್ಟಣ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿ: ಡಾ.ಮಂಜುನಾಥ್‌ ಪತ್ನಿ ಅನುಸೂಯ ಕಣಕ್ಕಿಳಿಸಲು ಪ್ಲಾನ್.?

ರಾಮನಗರ: ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ ಉಪಚುನಾವಣೆ ಅಖಾಡಕ್ಕೆ ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ.

ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ, ವದಂತಿಗಳ ಕೇಂದ್ರ ಬಿಂದುವೂ ಆಗಿದೆ. ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿಕೆಶಿ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ.ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.

ಈಗಾಗಲೇ ಬೆಂಗಳೂರು ಗ್ರಾಮಾಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್‌ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಂದು ವೇಳೆ ಡಿಕೆಶಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್‌ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್‌ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ.

ಅನುಸೂಯ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನುಸೂಯ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲಾ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

 

Tags: