ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೆಗೌಡ ಘೋಷಣೆ ಮಾಡಿದ್ದಾರೆ.
ನಗರದ ಜೆಪಿ ಭವದಲ್ಲಿ ನಡೆದ ಮೈತ್ರಿ ಸಭೆಯ ಬಳಿಕ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಷಣೆ ಮಾಡಲಾಗಿದೆ.
ಚನ್ನಪಟ್ಟಣದ ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್‌ನನ್ನು ಅಭ್ಯರ್ಥಿ ಮಾಡಿದ್ದೇವೆ. ನಾಳೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾನು ಸಹ ಚನ್ನಪಟ್ಟಣದಲ್ಲೇ ಇದ್ದು ಚುನಾವಣಾ ಪ್ರಚಾರ ಮಾಡಲಿದ್ದೇನೆ ಎಂದು ಎಚ್.ಡಿ ದೇವೆಗೌಡ ಅವರು ಹೇಳಿದರು.
ಮೈತ್ರಿ ಧರ್ಮದ ಪರವಾಗಿ ಬಿಎಸ್ ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು.