ರಾಜ್ಯ

ಚನ್ನಪಟ್ಟಣ: ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೆಗೌಡ ಘೋಷಣೆ ಮಾಡಿದ್ದಾರೆ.

ನಗರದ ಜೆಪಿ ಭವದಲ್ಲಿ ನಡೆದ ಮೈತ್ರಿ ಸಭೆಯ ಬಳಿಕ ನಿಖಿಲ್‌ ಕುಮಾರಸ್ವಾಮಿ ಹೆಸರನ್ನು ಘೋಷಣೆ ಮಾಡಲಾಗಿದೆ.

ಚನ್ನಪಟ್ಟಣದ ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್‌ನನ್ನು ಅಭ್ಯರ್ಥಿ ಮಾಡಿದ್ದೇವೆ. ನಾಳೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾನು ಸಹ ಚನ್ನಪಟ್ಟಣದಲ್ಲೇ ಇದ್ದು ಚುನಾವಣಾ ಪ್ರಚಾರ ಮಾಡಲಿದ್ದೇನೆ ಎಂದು ಎಚ್.ಡಿ ದೇವೆಗೌಡ ಅವರು ಹೇಳಿದರು.

ಮೈತ್ರಿ ಧರ್ಮದ ಪರವಾಗಿ ಬಿಎಸ್‌ ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ  ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 mins ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

7 mins ago

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

13 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

14 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago