Mysore
30
broken clouds

Social Media

ಮಂಗಳವಾರ, 19 ಮೇ 2026
Light
Dark

ನಿಖಿಲ್‌ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್‌ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ ಜನರು ನಿಖಿಲ್‌ ಕೈ ಹಿಡಿಯಲಿದ್ದಾರೆ. ಚುನಾವಣೆ 15 ದಿನ ಇರುವಾಗ ನಿಖಿಲ್‌ ಪ್ರಚಾರಕ್ಕೆ ಹೋಗಿದ್ದರು. ಆದರೆ ಯೋಗೇಶ್ವರ್‌ ಕಳೆದ 6 ತಿಂಗಳಿನಿಂದ ಪ್ರಚಾರ ನಡೆಸಿದ್ದರು ಎಂದರು.

ಇನ್ನು ಕಾಂಗ್ರೆಸ್‌ನವರು ಸಿ.ಪಿ.ಯೋಗೇಶ್ವರ್‌ರನ್ನು ಕೈಕಾಲು ಕಟ್ಟಿ ಕರೆದುಕೊಂಡು ಹೋದರು. ಕಾಂಗ್ರೆಸ್‌ನಲ್ಲಿ ಸಿಪಿವೈಗೆ ಉಜ್ವಲ ಭವಿಷ್ಯ ನೀಡಲಿ. ಅವರನ್ನು ಮಂತ್ರಿ ಮಾಡಲಿ ಎಂದು ಲೇವಡಿ ಮಾಡಿದರು.

ಇನ್ನು ಚನ್ನಪಟ್ಟಣ ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ಮನೆಯಲ್ಲಿ ಬಿದ್ದು ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

 

Tags:
error: Content is protected !!