ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ ಜನರು ನಿಖಿಲ್ ಕೈ ಹಿಡಿಯಲಿದ್ದಾರೆ. ಚುನಾವಣೆ 15 ದಿನ ಇರುವಾಗ ನಿಖಿಲ್ ಪ್ರಚಾರಕ್ಕೆ ಹೋಗಿದ್ದರು. ಆದರೆ ಯೋಗೇಶ್ವರ್ ಕಳೆದ 6 ತಿಂಗಳಿನಿಂದ ಪ್ರಚಾರ ನಡೆಸಿದ್ದರು ಎಂದರು.
ಇನ್ನು ಕಾಂಗ್ರೆಸ್‌ನವರು ಸಿ.ಪಿ.ಯೋಗೇಶ್ವರ್‌ರನ್ನು ಕೈಕಾಲು ಕಟ್ಟಿ ಕರೆದುಕೊಂಡು ಹೋದರು. ಕಾಂಗ್ರೆಸ್‌ನಲ್ಲಿ ಸಿಪಿವೈಗೆ ಉಜ್ವಲ ಭವಿಷ್ಯ ನೀಡಲಿ. ಅವರನ್ನು ಮಂತ್ರಿ ಮಾಡಲಿ ಎಂದು ಲೇವಡಿ ಮಾಡಿದರು.
ಇನ್ನು ಚನ್ನಪಟ್ಟಣ ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ಮನೆಯಲ್ಲಿ ಬಿದ್ದು ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…