ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಡಿ.ಕೆ.ಶಿವಕುಮಾರ್ ಅವರು ನೀಡಿದ್ದ ಹೇಳಿಕೆ ಕುರಿತು ಪಾಂಡವಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಟಿಕೆಟ್ ವಿಚಾರವಾಗಿ ಗೊಂದಲಗಳು ಏನಿಲ್ಲ. ಆದರೆ, ಯೋಗೇಶ್ವರ್ ಸಹ ಚುನಾವಣೆಗೆ ಸ್ಪರ್ಧಿಸಬೇಕು ಅಂತ ಹೇಳುತ್ತಿದ್ದಾರೆ. ನ್ಯಾಯವಾಗಿ ನೋಡುವುದಾದರೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನಮ್ಮ ಪಕ್ಷಕ್ಕೆ ದೊರೆಯಬೇಕು. ಈಗಾಗಲೇ ಬಿಜೆಪಿ ಅವರು ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮಾತಿಗೆ ನಾನು ತಲೆಕೆಡಿಸಿಕೊಳ್ಳಲ್ಲ. ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕೋ ಅದನ್ನೇ ನಮ್ಮ ಪಕ್ಷ ಮಾಡುತ್ತದೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು.