ರಾಜ್ಯ

ಉಪಚುನಾವಣೆ ಸಮರ: ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಡಿಕೆಶಿಗೆ ಡಿಚ್ಚಿ ಕೊಟ್ಟ ಕುಮಾರಸ್ವಾಮಿ

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಡಿ.ಕೆ.ಶಿವಕುಮಾರ್‌ ಅವರು ನೀಡಿದ್ದ ಹೇಳಿಕೆ ಕುರಿತು ಪಾಂಡವಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಟಿಕೆಟ್‌ ವಿಚಾರವಾಗಿ ಗೊಂದಲಗಳು ಏನಿಲ್ಲ. ಆದರೆ, ಯೋಗೇಶ್ವರ್‌ ಸಹ ಚುನಾವಣೆಗೆ ಸ್ಪರ್ಧಿಸಬೇಕು ಅಂತ ಹೇಳುತ್ತಿದ್ದಾರೆ. ನ್ಯಾಯವಾಗಿ ನೋಡುವುದಾದರೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನಮ್ಮ ಪಕ್ಷಕ್ಕೆ ದೊರೆಯಬೇಕು. ಈಗಾಗಲೇ ಬಿಜೆಪಿ ಅವರು ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ.  ಡಿ.ಕೆ.ಶಿವಕುಮಾರ್‌ ಮಾತಿಗೆ ನಾನು ತಲೆಕೆಡಿಸಿಕೊಳ್ಳಲ್ಲ. ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕೋ ಅದನ್ನೇ ನಮ್ಮ ಪಕ್ಷ ಮಾಡುತ್ತದೆ ಎಂದು ಡಿ.ಕೆ.ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

6 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

6 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

6 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

6 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

7 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

7 hours ago