Mysore
24
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ನಾನು ಚನ್ನಪಟ್ಟಣಕ್ಕೆ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯವಿದೆ ಎಂದ ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆದಿದೆ.

ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಎಲ್ಲರೂ ಹೇಳಿದ್ದಾರೆ. ಹಾಗಾಗಿ ನನ್ನ ಮೇಲೂ ಒತ್ತಡ ಇದೆ. ನಾನು ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.

ಇನ್ನು ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಗೌರವಕ್ಕೆ ಸದಾ ಋಣಿಯಾಗಿದ್ದೇನೆ. ಹೈಕಮಾಂಡ್‌ ತೀರ್ಮಾನವೇ ಅಂತಿಮ. ಹಾಗಾಗಿ ನಾನು ಏನನ್ನೂ ಹೇಳಲ್ಲ ಎಂದರು.

 

Tags:
error: Content is protected !!