ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಚುನಾವಣೆಗೆ ನೀವೇ ನಿಲ್ಲಲೇಬೇಕು ಎಂದು ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಬಹುತೇಕ ಸ್ಪರ್ಧೆ ಮಾಡಲೇಬೇಕು ಎಂದುಕೊಂಡಿದ್ದೇನೆ. ಚಿಹ್ನೆ ಯಾವುದಾದರೂ ಇರಲಿ. ಸ್ಪರ್ಧೆ ಮಾಡುವ ಇಂಗಿತವಿದೆ. ಎಲ್ಲವನ್ನೂ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಒತ್ತಡ ಮತ್ತು ಅವರ ನೈತಿಕತೆಯನ್ನು ಹೆಚ್ಚಿಸಲು ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಸುಳಿವು ನೀಡಿದ್ದೇನೆ. ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ. ಇನ್ನು ಕೆಲ ದಿನಗಳು ಕಾದು ನೋಡೋಣ ಎಂದರು.