ರಾಜ್ಯ

ಚನ್ನಪಟ್ಟಣ ಉಪಚುನಾವಣೆ: ಸ್ಪರ್ಧೆ ಬಗ್ಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದ್ದಿಷ್ಟು.

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್‌ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಚುನಾವಣೆಗೆ ನೀವೇ ನಿಲ್ಲಲೇಬೇಕು ಎಂದು ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಬಹುತೇಕ ಸ್ಪರ್ಧೆ ಮಾಡಲೇಬೇಕು ಎಂದುಕೊಂಡಿದ್ದೇನೆ. ಚಿಹ್ನೆ ಯಾವುದಾದರೂ ಇರಲಿ. ಸ್ಪರ್ಧೆ ಮಾಡುವ ಇಂಗಿತವಿದೆ. ಎಲ್ಲವನ್ನೂ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಒತ್ತಡ ಮತ್ತು ಅವರ ನೈತಿಕತೆಯನ್ನು ಹೆಚ್ಚಿಸಲು ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಸುಳಿವು ನೀಡಿದ್ದೇನೆ. ನನಗೆ ಟಿಕೆಟ್‌ ನೀಡುವ ವಿಶ್ವಾಸವಿದೆ. ಇನ್ನು ಕೆಲ ದಿನಗಳು ಕಾದು ನೋಡೋಣ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

2 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

3 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

4 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago