ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇತ್ತ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯೂ 20 ಸುತ್ತುಗಳಲ್ಲಿ ನಡೆದಿದೆ. ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ನಿಖಿಲ್, ಹಿನ್ನೆಡೆಯತ್ತ ಮುಖ ಮಾಡಿದರು.
ಹಾವು-ಏಣಿ ಆಟದಂತಿದ್ದ ಫಲಿತಾಂಶ 9ನೇ ಸುತ್ತಿನ ನಂತರ ಬದಲಾಯಿತು. ಇಲ್ಲಿಂದ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸಿಪಿವೈ ಕೊನೆಯವರೆಗೂ ಉಳಿಸಿಕೊಂಡು 25, 357 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 1,12,388 ಮತಗಳನ್ನು ಪಡೆದರೆ, ಎನ್‌ಡಿಎ ಅಭ್ಯರ್ಥಿ ನಿಖಿಲ್ 87,031 ಮತಗಳನ್ನು ಪಡೆದಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿಯಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…