ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಲಾಗುತ್ತಿದೆ.
ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಸಿಪಿವೈ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ಜೆಡಿಎಸ್‌ನಲ್ಲಿ ತಳಮಳ ಶುರುವಾಗಿದ್ದು, ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಎರಡು ಬಾರಿ ಸೋಲಿನ ಅನುಕಂಪವಿದ್ದು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇರುವುದರಿಂದ ನಿಖಿಲ್ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ಮೇಲಿನ ಅಭಿಮಾನ ಕೂಡ ನಿಖಿಲ್ ಕುಮಾರಸ್ವಾಮಿಗೆ ಲಾಭ ತಂದುಕೊಡುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಸಂಜೆಯ ವೇಳೆಗೆ ನಿಖಿಲ್ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ.