Mysore
28
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

ಚನ್ನಪಟ್ಟಣ ಸೋಲು: ನಿಖಿಲ್‌ ಫಸ್ಟ್‌ ರಿಯಾಕ್ಷನ್‌

ಚನ್ನಪಟ್ಟಣ: ಚುನಾವಣೆಯಲ್ಲಿ ಸೋತರು ಜನರ ಅಪಾರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್‌ ಕುಮಾರ್‌ಸ್ವಾಮಿ ತಿಳಿಸಿದ್ದಾರೆ.

ರಾಮನಗರದ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಇಂದು( ನ.23) ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. ನಾನು ಈ ಚುನಾವಣೆಯ ಸೋಲಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ. ಈಗಾಗಲೇ 2 ಬಾರಿ ಚುನಾವಣೆಯಲ್ಲಿ ಸೋತಿರುವುದರಿಂದ ಗೆಲುವು-ಸೋಲನ್ನು ಸಮಾನವಾಗಿ ಸ್ವೀಕಾರ ಮಾಡುತ್ತೇನೆ. ಆದರೆ ಈ ಚುನಾವಣೆಯ ಫಲಿತಾಂಶ ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಈ ಚುನಾವಣೆ ಬಯಸದೇ ಬಂದ ಭಾಗ್ಯವಾಗಿತ್ತು. ಆದರೆ ಫಲಿತಾಂಶದಲ್ಲಿ 87 ಸಾವಿರ ಮತಗಳು ಬಂದಿವೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಅಂತಿಮ ತೀರ್ಪಾಗಿರುವುದರಿಂದ ಅದನ್ನು ಸ್ವೀಕರಿಸಲೆಬೇಕು. ಹೀಗಾಗಿ ಚುನಾವಣೆಯಲ್ಲಿ ಸೋತಿದ್ದರೂ ನಾನು ಈ ಜಿಲ್ಲೆಯ ಮಗನೆಂದು ಭಾವಿಸುತ್ತೇನೆ ಎಂದಿದ್ದಾರೆ.

ಚುನಾವಣೆಯ ವೇಳೆ ಶ್ರಮಿಸಿದ ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನರು. ಹೀಗಾಗಿ ನಾನು ಈ ಜಿಲ್ಲೆಯಲ್ಲಿ ಜನಿಸಿಲ್ಲವಾದರೂ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದು, ಸಹ ನಾನು ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯ ಅಭಿವೃಧ್ಧಿ ಕಾರ್ಯಗಳಲ್ಲಿ ತೊಡಗುತ್ತೇನೆ ಎಂದು ಹೇಳಿದ್ದಾರೆ.

Tags: