ಚನ್ನಪಟ್ಟಣ: ಚುನಾವಣೆಯಲ್ಲಿ ಸೋತರು ಜನರ ಅಪಾರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರ್‌ಸ್ವಾಮಿ ತಿಳಿಸಿದ್ದಾರೆ.
ರಾಮನಗರದ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಇಂದು( ನ.23) ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. ನಾನು ಈ ಚುನಾವಣೆಯ ಸೋಲಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ. ಈಗಾಗಲೇ 2 ಬಾರಿ ಚುನಾವಣೆಯಲ್ಲಿ ಸೋತಿರುವುದರಿಂದ ಗೆಲುವು-ಸೋಲನ್ನು ಸಮಾನವಾಗಿ ಸ್ವೀಕಾರ ಮಾಡುತ್ತೇನೆ. ಆದರೆ ಈ ಚುನಾವಣೆಯ ಫಲಿತಾಂಶ ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನನಗೆ ಈ ಚುನಾವಣೆ ಬಯಸದೇ ಬಂದ ಭಾಗ್ಯವಾಗಿತ್ತು. ಆದರೆ ಫಲಿತಾಂಶದಲ್ಲಿ 87 ಸಾವಿರ ಮತಗಳು ಬಂದಿವೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಅಂತಿಮ ತೀರ್ಪಾಗಿರುವುದರಿಂದ ಅದನ್ನು ಸ್ವೀಕರಿಸಲೆಬೇಕು. ಹೀಗಾಗಿ ಚುನಾವಣೆಯಲ್ಲಿ ಸೋತಿದ್ದರೂ ನಾನು ಈ ಜಿಲ್ಲೆಯ ಮಗನೆಂದು ಭಾವಿಸುತ್ತೇನೆ ಎಂದಿದ್ದಾರೆ.
ಚುನಾವಣೆಯ ವೇಳೆ ಶ್ರಮಿಸಿದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನರು. ಹೀಗಾಗಿ ನಾನು ಈ ಜಿಲ್ಲೆಯಲ್ಲಿ ಜನಿಸಿಲ್ಲವಾದರೂ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದು, ಸಹ ನಾನು ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯ ಅಭಿವೃಧ್ಧಿ ಕಾರ್ಯಗಳಲ್ಲಿ ತೊಡಗುತ್ತೇನೆ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…